Home ಟಾಪ್ ಸುದ್ದಿಗಳು ಅಮಿತ್ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ನಾಳೆ ಕೋರ್ಟ್’ಗೆ ಹಾಜರಾಗಲಿರುವ ರಾಹುಲ್ ಗಾಂಧಿ

ಅಮಿತ್ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ನಾಳೆ ಕೋರ್ಟ್’ಗೆ ಹಾಜರಾಗಲಿರುವ ರಾಹುಲ್ ಗಾಂಧಿ

ಸುಲ್ತಾನ್ಪುರ: ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪ ಎದುರಿಸುತ್ತಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಶುಕ್ರವಾರ ಇಲ್ಲಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ.


ಇಂದು ಲಖನೌ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಬಳಿಕ ಸುಲ್ತಾನ್ ಪುರದ ಕಡೆಗೆ ತೆರಳಲಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಅಭಿಷೇಕ್ ರಾಣಾ ತಿಳಿಸಿದ್ದಾರೆ.


ಸ್ಥಳೀಯ ಬಿಜೆಪಿ ನಾಯಕ ವಿಜಯ್ ಮಿಶ್ರಾ ಎಂಬುವವರು, ಆಗಿನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ವಿರುದ್ಧ ಮಾನಹಾನಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ 2018 ಆಗಸ್ಟ್ 4ರಂದು ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

Join Whatsapp
Exit mobile version