ಅಮೇಥಿಯಿಂದ ರಾಹುಲ್ ಗಾಂಧಿ, ರಾಯ್ ಬರೇಲಿಯಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧೆ ಬಹುತೇಕ ಖಚಿತ

Prasthutha|

ನವದೆಹಲಿ: ಕಾಂಗ್ರೆಸ್ ನಾಯಕರಾದ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ರಾಹುಲ್ ಗಾಂಧಿ ಅವರು ಕ್ರಮವಾಗಿ ರಾಯ್ ಬರೇಲಿ ಮತ್ತು ಅಮೇಥಿ ಕ್ಷೇತ್ರಗಳಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಮೂಲಗಳು ಗುರುವಾರ ತಿಳಿಸಿವೆ.

- Advertisement -


ಮೂಲಗಳ ಪ್ರಕಾರ ಏಪ್ರಿಲ್ 26 ರ ನಂತರ ಈ ಕುರಿತು ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಮತ್ತು ನಾಳೆ 2ನೇ ಹಂತದ ಚುನಾವಣೆ ಮುಗಿದ ನಂತರ ಮುಂದಿನ ವಾರ ನಾಮಪತ್ರ ಸಲ್ಲಿಸಬಹುದು ಎನ್ನಲಾಗಿದೆ. ಎರಡನೇ ಹಂತದಲ್ಲಿ ರಾಹುಲ್ ಗಾಂಧಿ ಸ್ಪರ್ಧಿಸುತ್ತಿರುವ ವಯನಾಡಿನಲ್ಲಿ ಚುನಾವಣೆ ನಡೆಯುತ್ತಿದೆ.


ಅಮೇಥಿಯಲ್ಲಿ 2019 ರ ಲೋಕಸಭೆ ಚುನಾವಣೆಯಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಸೋಲು ಅನುಭವಿಸಿದ್ದ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮತ್ತೆ ಇರಾನಿ ವಿರುದ್ಧ ಕಣಕ್ಕಿಳಿಯಲಿದ್ದಾರೆ.

Join Whatsapp