ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಮೇಥಿ ಬದಲಿಗೆ ಉತ್ತರ ಪ್ರದೇಶದ ರಾಯ್ ಬರೇಲಿ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಹಾಗೆಯೇ ಅಮೇಥಿಯಿಂದ ಕಿಶೋರಿ ಲಾಲ್ ಶರ್ಮಾರ ಹೆಸರು ಕೇಳಿಬಂದಿದೆ. ರಾಹುಲ್ ಗಾಂಧಿ ರಾಯ್ ಬರೇಲಿ ಹೊರತಾಗಿ ಕೇರಳದ ವಯನಾಡಿನಿಂದಲೂ ಸ್ಪರ್ಧಿಸಿದ್ದು ಅಲ್ಲಿ ಚುನಾವಣೆ ಮುಗಿದಿದೆ. ರಾಯ್ ಬರೇಲಿಯಲ್ಲಿ ಮೇ 20ರಂದು ಮತದಾನ ನಡೆಯಲಿದೆ.