ಇಂದು ರಾಹುಲ್ ಗಾಂಧಿ ಕರ್ನಾಟಕಕ್ಕೆ

Prasthutha|

ವಿಜಯಪುರ: ಲೋಕಸಭಾ ಚುನಾವಣೆ ಪ್ರಚಾರಾರ್ಥ ಕಾಂಗ್ರೆಸ್‌ ವರಿಷ್ಠ ರಾಹುಲ್‌ ಗಾಂಧಿ ಇಂದು ಪೂರ್ವಾಹ್ನ 11ಕ್ಕೆ ವಿಜಯಪುರಕ್ಕೆ ಆಗಮಿಸಲಿದ್ದಾರೆ.

- Advertisement -

ರಾಹುಲ್‌ ಗಾಂಧಿ ದೆಹಲಿಯಿಂದ ಕಲಬುರ್ಗಿಗೆಗೆ ವಿಶೇಷ ವಿಮಾನದಲ್ಲಿ ಏ ಬೆಳಿಗ್ಗೆ ಆಗಮಿಸಲಿದ್ದು, ಅಲ್ಲಿಂದ ವಿಜಯಪುರಕ್ಕೆ ಹೆಲಿಕಾಪ್ಟರ್‌ನಲ್ಲಿ ವಿಜಯಪುರಕ್ಕೆ ಬರಲಿದ್ದಾರೆ.

ವಿಜಯಪುರ ನಗರದ ಸೋಲಾಪುರ ರಸ್ತೆಯಲ್ಲಿರುವ ಬಿಎಲ್‌ಡಿಇ ಹೊಸ ಕ್ಯಾಂಪಸ್‌ನಲ್ಲಿ ಕಾಂಗ್ರೆಸ್ ಸಮಾರಂಭ ನಡೆಯಲಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸಿಂಗ್‌ ಸುರ್ಜೆವಾಲ, ಕೆ.ಸಿ.ವೇಣುಗೋಪಾಲ ಹಾಗೂ ಸಚಿವರು, ಶಾಸಕರು, ಮುಖಂಡರು ಈ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

- Advertisement -

ಸಮಾವೇಶದಲ್ಲಿ ಸುಮಾರು 50 ಸಾವಿರಕ್ಕೂ ಅಧಿಕ ಜನ ಭಾಗವಹಿಸುವ ನಿರೀಕ್ಷೆ ಇದೆ. ಸಮಾವೇಶಕ್ಕಾಗಿ ಬೃಹತ್‌ ಪೆಂಡಾಲ್‌ ಹಾಕಲಾಗಿದೆ. ಕೂರಲು ಆಸನದ ವ್ಯವಸ್ಥೆ, ಕುಡಿಯಲು ನೀರಿನ ವ್ಯವಸ್ಥೆಯನ್ನು ಮಾಡಲಾಗಿದೆ.

Join Whatsapp