ವಯನಾಡ್ ಲೋಕಸಭಾ ಕ್ಷೇತ್ರ ಪ್ರಿಯಾಂಕ ಗಾಂಧಿಗೆ ಬಿಟ್ಟುಕೊಡಲಿರುವ ರಾಹುಲ್ ಗಾಂಧಿ

Prasthutha|

ನವದೆಹಲಿ: ಉತ್ತರ ಪ್ರದೇಶದ ರಾಯ್ ಬರೇಲಿ ಮತ್ತು ಕೇರಳದ ವಯನಾಡ್ ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಯನಾಡ್ ಕ್ಷೇತ್ರವನ್ನು ತ್ಯಜಿಸಲಿದ್ದಾರೆ ಎಂದು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಕಟಿಸಿದ್ದಾರೆ.

- Advertisement -

ಕಾಂಗ್ರೆಸ್ ಉನ್ನತ ನಾಯಕತ್ವವು ಸೋಮವಾರ ಖರ್ಗೆ ಅವರ ನಿವಾಸದಲ್ಲಿ ಚರ್ಚೆ ನಡೆಸಿದ ನಂತರ ಈ ಪ್ರಕಟಣೆ ಹೊರಬಿದ್ದಿದೆ. ಈ ಮೂಲಕ ಕೇರಳದ ವಯನಾಡು ಕ್ಷೇತ್ರವನ್ನು ಬಿಟ್ಟುಕೊಟ್ಟು, ಉತ್ತರ ಪ್ರದೇಶದ ರಾಯ್ ಬರೇಲಿ ಉಳಿಸಿಕೊಂಡಿದ್ದಾರೆ.

ಪ್ರಿಯಾಂಕಾ ಗಾಂಧಿ ವಾದ್ರಾ ವಯನಾಡ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ನಿರ್ಧರಿಸಿದ್ದೇವೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

- Advertisement -

Join Whatsapp
Exit mobile version