Home ಟಾಪ್ ಸುದ್ದಿಗಳು ರಾಹುಲ್ ಗಾಂಧಿ ಟ್ವಿಟರ್ ಖಾತೆ ಸ್ಥಗಿತ

ರಾಹುಲ್ ಗಾಂಧಿ ಟ್ವಿಟರ್ ಖಾತೆ ಸ್ಥಗಿತ

ನವದೆಹಲಿ:  ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯ ಪೋಷಕರ ಫೋಟೊ ಹಂಚಿಕೊಂಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಟ್ವಿಟರ್ ಖಾತೆ ತಾತ್ಕಾಲಿಕವಾಗಿ ಸ್ಥಗಿತವಾಗಿದೆ.

ರಾಹುಲ್ ಗಾಂಧಿ ಅವರ ಟ್ವಿಟರ್ ಖಾತೆ ಶನಿವಾರ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ ಎಂದು ಕಾಂಗ್ರೆಸ್ ತಿಳಿಸಿದೆ. ಅತ್ಯಾಚಾರ ಸಂತ್ರಸ್ತೆಯ ಕುಟುಂಬಸ್ಥರ ಜೊತೆಗಿನ ಫೋಟೊದೊಂದಿಗೆ ರಾಹುಲ್‌ ಗಾಂಧಿ ಅವರು ಇತ್ತೀಚೆಗೆ ಮಾಡಿದ್ದ ಪೋಸ್ಟ್​ ನ್ನು ಟ್ವಿಟರ್‌ ತೆಗೆದು ಹಾಕಿತ್ತು. ಇದಾದ ಮರುದಿನವೇ ಖಾತೆಯನ್ನು ಸ್ಥಗಿತಗೊಳಿಸಲಾಗಿದೆ.

‘ರಾಹುಲ್ ಗಾಂಧಿ ಅವರ ಟ್ವಿಟರ್ ಖಾತೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಅದನ್ನು ಸರಿಪಡಿಸಲು ಎಲ್ಲ ಕಾರ್ಯ ನಡೆಯುತ್ತಿದೆ. ಅಲ್ಲಿಯವರೆಗೂ ರಾಹುಲ್​ ಅವರು ಇತರ ಸಾಮಾಜಿಕ ಮಾಧ್ಯಮಗಳ ಮೂಲಕ ಎಲ್ಲರ ಜೊತೆ ಸಂಪರ್ಕದಲ್ಲಿರುತ್ತಾರೆ. ಜನರಿಗಾಗಿ ಮತ್ತು ಅವರ ಹಕ್ಕುಗಳಿಗಾಗಿ ದನಿಯೆತ್ತುವುದನ್ನು ಮುಂದುವರೆಸುತ್ತಾರೆ. ಜೈ ಹಿಂದ್’ ಎಂದು ಕಾಂಗ್ರೆಸ್‌ ಟ್ವೀಟ್ ಮಾಡಿದೆ.

Join Whatsapp
Exit mobile version