ಪುನೀತ್ ರಾಜ್ ಕುಮಾರ್ ಮನೆಗೆ ರಾಹುಲ್ ಗಾಂಧಿ ಭೇಟಿ

Prasthutha|

ಬೆಂಗಳೂರು: ತುಮಕೂರಿನ ಸಿದ್ಧಗಂಗಾ ಮಠದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ, ರಾಹುಲ್ ಗಾಂಧಿ ಪುನೀತ್ ರಾಜ್ ಕುಮಾರ್ ನಿವಾಸಕ್ಕೆ ಭೇಟಿ ನೀಡಿ ಅಪ್ಪು ಫೋಟೋಗೆ ನಮನ ಸಲ್ಲಿಸಿದ್ದಾರೆ.

- Advertisement -

ಈ ವೇಳೆ ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಗೆ ಧೈರ್ಯದ ಮಾತುಗಳನ್ನು ಹೇಳಿದ್ದಾರೆ. ರಾಹುಲ್ ಗಾಂಧಿ ಜೊತೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಎಂ.ಬಿ. ಪಾಟೀಲ್ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.

Join Whatsapp