ತುಮಕೂರಿನ ಸಿದ್ಧಗಂಗಾ ಮಠಕ್ಕೆ ರಾಹುಲ್ ಗಾಂಧಿ ಭೇಟಿ

Prasthutha|

ತುಮಕೂರು: ತುಮಕೂರಿನ ಸಿದ್ದಗಂಗಾ ಮಠಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ ನೀಡಿದ್ದಾರೆ. ನಾಳೆ ಶಿವಕುಮಾರ ಶ್ರೀ ಗಳ 115 ನೇ ಜಯಂತಿ ಕಾರ್ಯಕ್ರಮ ನಡೆಯಲಿದ್ದು, ಒಂದು ದಿನವೇ ಮೊದಲೇ ರಾಹುಲ್ ಭೇಟಿ ನೀಡಿದ್ದಾರೆ.

- Advertisement -

ಸಂಜೆ 4 ಗಂಟೆಗೆ ರಸ್ತೆ ಮೂಲಕ ಆಗಮಿಸಿದ ರಾಹುಲ್, ಸಿದ್ದಗಂಗಾ ಮಠದ ಶಿವಕುಮಾರ್ ಶ್ರೀ ಗಳ ಗದ್ದುಗೆ ದರ್ಶನ ಪಡೆದು ಪೂಜೆ ಸಲ್ಲಿಸಿದ್ದಾರೆ.

ಈ ವೇಳೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಎಂ.ಬಿ.ಪಾಟೀಲ್, ಪರಮೇಶ್ವರ್, ಈಶ್ವರ್ ಖಂಡ್ರೆ ಸೇರಿದಂತೆ ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದರು.

Join Whatsapp