ರಾಹುಲ್ ಗಾಂಧಿ ಪ್ರಾಮಾಣಿಕ ಉತ್ತರ ನೀಡಲಿದ್ದಾರೆ: ಸುಪ್ರಿಯಾ ಸುಳೆ

Prasthutha|

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಚುನಾವಣಾ ಆಯೋಗದ ನೋಟಿಸ್ಗೆ ಗೌರವಯುತ ಮತ್ತು ಪ್ರಾಮಾಣಿಕವಾಗಿ ಉತ್ತರ ನೀಡಲಿದ್ದಾರೆ ಎಂದು ಎನ್ ಸಿಪಿ ಸಂಸದೆ ಸುಪ್ರಿಯಾ ಸುಳೆ ಹೇಳಿದ್ದಾರೆ.

- Advertisement -


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಹುಲ್ ಅವರು ಪ್ರಾಮಾಣಿಕ ಉತ್ತರವನ್ನು ನೀಡುತ್ತಾರೆ ಎಂದು ನನಗೆ ವಿಶ್ವಾಸವಿದೆ. ಅವರು ಪ್ರಾಮಾಣಿಕರಾಗಿರುವುದರಿಂದ ನಿರ್ಭೀತಿಯಿಂದ ಇರುತ್ತಾರೆ’ ಎಂದು ಸುಪ್ರಿಯಾ ಸುಳೆ ತಿಳಿಸಿದ್ದಾರೆ.


ಬಿಜೆಪಿಗರು ಜವಾಹರಲಾಲ್ ನೆಹರೂ ಕುಟುಂಬದ ಬಗ್ಗೆ ಮಾತನಾಡಿದ ಹಲವು ಉದಾಹರಣೆಗಳಿವೆ. ಹಾಗಾಗಿ ಅವರು (ಬಿಜೆಪಿಗರು) ಏನಾದರೂ ಮಾತನಾಡಿದರೆ ಬೇಸರಗೊಳ್ಳುವ ಅಗತ್ಯವೇನಿದೆ ಎಂದು ಸುಪ್ರಿಯಾ ಪ್ರಶ್ನಿಸಿದ್ದಾರೆ.

Join Whatsapp