Home ಟಾಪ್ ಸುದ್ದಿಗಳು ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ಕರ್ನಾಟಕದಲ್ಲಿ ಮುಕ್ತಾಯ

ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ಕರ್ನಾಟಕದಲ್ಲಿ ಮುಕ್ತಾಯ

ರಾಯಚೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ಇಂದು ರಾಯಚೂರು ಮೂಲಕ ತೆಲಂಗಾಣಕ್ಕೆ ಕಾಲಿಟ್ಟಿದ್ದು, ಈ ಮೂಲಕ ರಾಜ್ಯದಲ್ಲಿನ ಯಾತ್ರೆ ಮುಕ್ತಾಯವಾಗಿದೆ.

ರಾಯಚೂರಿನಲ್ಲಿ 3ನೇ ದಿನದ ಯಾತ್ರೆ ಬೆಳಗ್ಗೆ 6 ಗಂಟೆಗೆ ಆರಂಭವಾಗಿ ಶಕ್ತಿನಗರ ಮಾರ್ಗವಾಗಿ ಕೃಷ್ಣಾ ನದಿ ಸೇತುವೆ ಮೂಲಕ ತೆಲಂಗಾಣಕ್ಕೆ ಪ್ರವೇಶಿಸಿತು. ಪಾದಯಾತ್ರೆ ವೇಳೆ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಸೇರಿ ರಾಜ್ಯದ ಹಲವಾರು ಕಾಂಗ್ರೆಸ್ ಮುಖಂಡರು ಭಾಗವಹಿಸಿದ್ದರು. ರಾಜ್ಯದಲ್ಲಿ ಸುಮಾರು 500 ಕಿ.ಮೀ ಪಾದಯಾತ್ರೆ ನಡೆದಿದೆ.


ಭಾನುವಾರ ತೆಲಂಗಾಣ ಪ್ರವೇಶಿಸಿದ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ರಾಹುಲ್ ಗಾಂಧಿ ಹಾಗೂ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ತೆಲಂಗಾಣ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಅನುಮೂಲ ರೇವಂತ್ ರೆಡ್ಡಿ ಅವರಿಗೆ ಧ್ವಜ ಹಸ್ತಾಂತರಿಸಿದರು.

Join Whatsapp
Exit mobile version