ಕರ್ನಾಟಕದಲ್ಲಿ ರಾಹುಲ್ ‘ಭಾರತ್ ಜೋಡೋ ಯಾತ್ರೆ’: 22 ದಿನದಲ್ಲಿ 510 ಕಿಮೀ ನಡಿಗೆ

Prasthutha|

ಬೆಂಗಳೂರು: ಕಾಂಗ್ರೆಸ್‌ ರಾಷ್ಟ್ರೀಯ ವಕ್ತಾರ ರಾಹುಲ್‌ ಗಾಂಧಿ ಹಮ್ಮಿಕೊಂಡಿರುವ  ‘ಭಾರತ್‌ ಜೋಡೋ ಯಾತ್ರೆ’ಯು ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 22 ದಿನಗಳ ಕಾಲ ನಡೆಯಲಿದೆ. ರಾಜ್ಯದಲ್ಲೇ ಬರೋಬ್ಬರಿ 510 ಕಿ.ಮೀ. ಉದ್ದದವರೆಗೆ ಯಾತ್ರೆ ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

- Advertisement -

ರಾಹುಲ್‌ ಗಾಂಧಿ ಅವರು ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಕಾಲ್ನಡಿಗೆ ಮೂಲಕವೇ ಯಾತ್ರೆ ಪೂರೈಸಲು ನಿರ್ಧರಿಸಿದ್ದಾರೆ. ರಾಜ್ಯದಲ್ಲಿ ನಿತ್ಯ ಸರಾಸರಿ 20 ಕಿ.ಮೀ. (ಕೆಲವು ದಿನ 25 ಕಿ.ಮೀ.) ಪಾದಯಾತ್ರೆ ನಡೆಯಲಿದೆ ಎಂದು ಡಿಕೆಶಿ ತಿಳಿಸಿದ್ದಾರೆ.

ದೆಹಲಿಯಲ್ಲಿ ನಡೆದ ಭಾರತ್‌ ಜೋಡೋ ಯಾತ್ರೆ ಪೂರ್ವಸಿದ್ಧತಾ ಸಭೆಯಲ್ಲಿ ಪಾಲ್ಗೊಂಡು ಬಳಿಕ ರಾಜ್ಯದಲ್ಲಿ ನಡೆಯಲಿರುವ ಯಾತ್ರೆಯ ರೂಪುರೇಷೆಗಳ ಬಗ್ಗೆ ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಕರ್ನಾಟಕದಲ್ಲಿ ಮಹಾತ್ಮ ಗಾಂಧೀಜಿ ಎಐಸಿಸಿ ಅಧಿವೇಶನ ನಡೆಸಿದ್ದರು. ಬಳಿಕವೇ ಗಾಂಧೀಜಿ ಅವರು ನಾಯಕತ್ವ ವಹಿಸಿಕೊಂಡರು. ಇದೀಗ ರಾಹುಲ್‌ ಗಾಂಧಿ ಅವರು ಭಾರತ್‌ ಜೋಡೋ ಯಾತ್ರೆಗೆ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.

- Advertisement -

ಅಕ್ಟೋಬರ್‌ ಮೊದಲ ವಾರದಲ್ಲಿ ಪ್ರಾರಂಭವಾಗಲಿರುವ ಯಾತ್ರೆ ರಾಜ್ಯಕ್ಕೆ ಯಾವಾಗ ಬರಲಿದೆ ಎಂಬುದು ಇನ್ನೂ ಗೊತ್ತಿಲ್ಲ. ಪಾದಯಾತ್ರೆ ನಡೆಸಲು ಬಳ್ಳಾರಿ ಯಾತ್ರೆ, ಮೇಕೆದಾಟು ಪಾದಯಾತ್ರೆ ಸೇರಿದಂತೆ ಹಲವು ಪಾದಯಾತ್ರೆ ಯಶಸ್ವಿಗೊಳಿಸಿದ ಅನುಭವ ನಮಗಿದೆ. ಈ ಬಗ್ಗೆ ಪ್ರಾತ್ಯಕ್ಷಿಕೆಯನ್ನೂ ನೀಡಿದ್ದೇವೆ. ದೇಶವನ್ನು ಒಗ್ಗೂಡಿಸುವ ಕಾರ್ಯಕ್ರಮಕ್ಕೆ ರಾಜ್ಯದೆಲ್ಲೆಡೆಯಿಂದ ಜನ ಬೆಂಬಲ ವ್ಯಕ್ತವಾಗಲಿದೆ ಎಂದು ಡಿಕೆಶಿ ವಿಶ್ವಾಸ  ಭರವಸೆ ನುಡಿದಿದ್ದಾರೆ



Join Whatsapp