ರಾಹುಲ್ ಗಾಂಧಿ ಅನರ್ಹತೆ: ಕಾಂಗ್ರೆಸ್ ಮೌನ ಪ್ರತಿಭಟನೆ

Prasthutha|

ಬೆಂಗಳೂರು: ರಾಹುಲ್ ಗಾಂಧಿ ಅವರ ರಾಜಕೀಯ ಜೀವನ ಮುಗಿಸಲು ಬಿಜೆಪಿ ಷಡ್ಯಂತ್ರ ನಡೆಸುತ್ತಿದ್ದು, ರಾಹುಲ್ ಗಾಂಧಿ ಅನರ್ಹತೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ ವಿಚಾರವಾಗಿ ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಇಂದು ಕಾಂಗ್ರೆಸ್ ಮೌನ ಪ್ರತಿಭಟನೆ ನಡೆಸುತ್ತಿದೆ.

- Advertisement -


ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ʻಕೈʼ ಪ್ರತಿಭಟನೆ ನಡೆಸುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಖುದ್ದಾಗಿ ಪ್ರತಿಭಟನೆಗೆ ಇಳಿದಿದ್ದಾರೆ.


ಡಿಸಿಎಂ ಡಿಕೆಶಿ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲಾ ಸೇರಿದಂತೆ ಪ್ರಿಯಾಂಕ ಖರ್ಗೆ, ಸತೀಶ್ ಜಾರಕಿಹೊಳಿ, ಶರಣ ಬಸಪ್ಪ, ಸಂತೋಷ್ ಲಾಡ್, ಶಾಸಕರಾದ ಪುಟ್ಟರಂಗಶೆಟ್ಟಿ, ಎ.ಆರ್.ಕೃಷ್ಣಮೂರ್ತಿ, ತುಕಾರಾಂ, ಮಹಂತೇಶ್, ಯುಬಿ ಬಣಕಾರ್, ಬಸವರಾಜ್ ದದ್ದಲ್ ಮುಂತಾದ ನಾಯಕರು ಬಾಯಿಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಮೌನ ಪ್ರತಿಭಟನೆ ನಡೆಸುತ್ತಿದ್ದಾರೆ,