Home ಕರಾವಳಿ ರಾಹುಲ್ ಗಾಂಧಿ ಅನರ್ಹತೆ ಪ್ರಜಾಪ್ರಭುತ್ವಕ್ಕೆ ಕಪ್ಪುಚುಕ್ಕೆ : ಇನಾಯತ್ ಅಲಿ

ರಾಹುಲ್ ಗಾಂಧಿ ಅನರ್ಹತೆ ಪ್ರಜಾಪ್ರಭುತ್ವಕ್ಕೆ ಕಪ್ಪುಚುಕ್ಕೆ : ಇನಾಯತ್ ಅಲಿ

ಮಂಗಳೂರು : ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿರುವ ಕ್ರಮವನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ವಿರೋಧಿಸಿದ್ದಾರೆ. ರಾಹುಲ್ ಗಾಂಧಿ ಅವರನ್ನು ಲೋಕಸಭೆ ಸದಸ್ಯತ್ವ ಸ್ಥಾನದಿಂದ ಅನರ್ಹಗೊಳಿಸುವ ಮೂಲಕ ಬಿಜೆಪಿ ಸರ್ಕಾರ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಪ್ಪು ಚುಕ್ಕೆ ಇಟ್ಟಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಹುಲ್ ಗಾಂಧಿ ಅವರನ್ನು ಅನರ್ಹತೆಗೊಳಿಸಿರುವುದು ಸರ್ವಾಧಿಕಾರಿ ಧೋರಣೆ ಎಂದು ಇನಾಯತ್ ಅಲಿ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಸರ್ವಾಧಿಕಾರಿ ಧೋರಣೆಯಿಂದಾಗಿ ಭಾರತದಲ್ಲಿ ಪ್ರಜಾಪ್ರಭುತ್ವ ಅಪಾಯದಲ್ಲಿರುವುದು ಮತ್ತೊಮ್ಮೆ ಸಾಬೀತಾಗಿದೆ ಎಂದು ಅವರು ಹೇಳಿದ್ದಾರೆ.

Join Whatsapp
Exit mobile version