Home ಟಾಪ್ ಸುದ್ದಿಗಳು ರಾಹುಲ್ ಗಾಂಧಿ ಕಚೇರಿ ಧ್ವಂಸ: CPIM ಕೃತ್ಯ ಎಂದು ಆರೋಪಿಸಿದ ಕಾಂಗ್ರೆಸ್

ರಾಹುಲ್ ಗಾಂಧಿ ಕಚೇರಿ ಧ್ವಂಸ: CPIM ಕೃತ್ಯ ಎಂದು ಆರೋಪಿಸಿದ ಕಾಂಗ್ರೆಸ್

ತಿರುವನಂತಪುರಂ: ಕೇರಳದ ವಯನಾಡಿನಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ಕಚೇರಿಯನ್ನು ಧ್ವಂಸಗೊಳಿಸಲಾಗಿದೆ ಎಂದು ಕೇರಳ ಪೊಲೀಸರು ತಿಳಿಸಿದ್ದಾರೆ. ಈ ದಾಳಿಯಲ್ಲಿ ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್ಎಫ್ಐ) ಭಾಗಿಯಾಗಿದೆ ಎಂದು ಕಾಂಗ್ರೆಸ್ ಪಕ್ಷ ಆರೋಪಿಸಿದೆ.

ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ, ಎಸ್ಎಫ್ಐ ಕಾರ್ಯಕರ್ತರು ಮತ್ತು ನಾಯಕರ ಗುಂಪು ವಯನಾಡ್ ಸಂಸದ ರಾಹುಲ್ ಗಾಂಧಿ ಅವರ ಕಚೇರಿಯನ್ನು ಬಲವಂತವಾಗಿ ಅತಿಕ್ರಮಿಸಿ ಧ್ವಂಸಗೊಳಿಸಿದ್ದಾರೆ. ಕಾರಣ ನಮಗೆ ಗೊತ್ತಿಲ್ಲ ಎಂದು ಕಾಂಗ್ರೆಸ್ ನಾಯಕ ಕೆ.ಸಿ.ವೇಣುಗೋಪಾಲ್ ತಿಳಿಸಿದ್ದಾರೆ.

ರಾಹುಲ್ ಗಾಂಧಿ ಅವರ ವಯನಾಡಿನಲ್ಲಿರುವ ಕಚೇರಿ ಮೇಲೆ ನಡೆದ ದಾಳಿಯ ದೃಶ್ಯಗಳನ್ನು ಕಾಂಗ್ರೆಸ್ ಸಂಸದ ಶಶಿ ತರೂರ್ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಟ್ವೀಟ್ ಅನ್ನು ಕೇರಳ ಸಿಎಂ ಪಿಣರಾಯಿ ವಿಜಯನ್ ಮತ್ತು ಸಿಪಿಐ(M) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಅವರರಿಗೂ ಟ್ಯಾಗ್ ಮಾಡಿದ್ದಾರೆ. ಸಿಪಿಐ(M) ಕಾರ್ಯಕರ್ತರೇ ಹಲ್ಲೆ ನಡೆಸಿದ್ದಾರೆ ಎಂದು ಸಂಸದ ಶಶಿ ತರೂರ್ ಆರೋಪಿಸಿದ್ದಾರೆ.

Join Whatsapp
Exit mobile version