ರಾಹುಲ್ ಗಾಂಧಿ ಹೇಳಿಕೆ ತಿರುಚಿದ ಪ್ರಕರಣ: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ರೋಹಿತ್ ರಂಜನ್

Prasthutha|

ನವದೆಹಲಿ: ಝೀ ನ್ಯೂಸ್ ನಿರೂಪಕ ರೋಹಿತ್ ರಂಜನ್ ತಮ್ಮ ವಿರುದ್ಧ ದಾಖಲಾದ ದೂರನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ತಪ್ಪುದಾರಿಗೆಳೆಯುವಂತಹ ವೀಡಿಯೋ ತುಣುಕುಗಳನ್ನು ಪ್ರಸಾರ ಮಾಡಿದ ಆರೋಪದ ಮೇಲೆ ನೋಯ್ಡಾ ಪೊಲೀಸರಿಂದ ಬಂಧಿಸಲ್ಪಟ್ಟ ಝೀ ನ್ಯೂಸ್ ನಿರೂಪಕ ರೋಹಿತ್ ರಂಜನ್ ಅವರನ್ನು ಸುಮಾರು 12 ಗಂಟೆಗಳ ವಿಚಾರಣೆಯ ನಂತರ, ಜುಲೈ 5 ರ ಮಂಗಳವಾರ ತಡರಾತ್ರಿ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು.

ಏತನ್ಮಧ್ಯೆ, ತಮ್ಮ ವಿರುದ್ಧ ದಾಖಲಾದ ಅನೇಕ ಎಫ್ ಐಆರ್ ಗಳನ್ನು ಪ್ರಶ್ನಿಸಿ ರೋಹಿತ್ ರಂಜನ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಅಲ್ಲದೆ  ಗುರುವಾರ  ಈ ವಿಷಯವನ್ನು ತುರ್ತಾಗಿ ಪಟ್ಟಿ ಮಾಡಲು ಸುಪ್ರೀಂ ಕೋರ್ಟ್ ಒಪ್ಪಿಗೆ ಸೂಚಿಸಿದೆ.



Join Whatsapp