Home ಟಾಪ್ ಸುದ್ದಿಗಳು ರಾಹುಲ್ ಗಾಂಧಿ ಹೇಳಿಕೆ ತಿರುಚಿದ ಪ್ರಕರಣ: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ರೋಹಿತ್ ರಂಜನ್

ರಾಹುಲ್ ಗಾಂಧಿ ಹೇಳಿಕೆ ತಿರುಚಿದ ಪ್ರಕರಣ: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ರೋಹಿತ್ ರಂಜನ್

ನವದೆಹಲಿ: ಝೀ ನ್ಯೂಸ್ ನಿರೂಪಕ ರೋಹಿತ್ ರಂಜನ್ ತಮ್ಮ ವಿರುದ್ಧ ದಾಖಲಾದ ದೂರನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ತಪ್ಪುದಾರಿಗೆಳೆಯುವಂತಹ ವೀಡಿಯೋ ತುಣುಕುಗಳನ್ನು ಪ್ರಸಾರ ಮಾಡಿದ ಆರೋಪದ ಮೇಲೆ ನೋಯ್ಡಾ ಪೊಲೀಸರಿಂದ ಬಂಧಿಸಲ್ಪಟ್ಟ ಝೀ ನ್ಯೂಸ್ ನಿರೂಪಕ ರೋಹಿತ್ ರಂಜನ್ ಅವರನ್ನು ಸುಮಾರು 12 ಗಂಟೆಗಳ ವಿಚಾರಣೆಯ ನಂತರ, ಜುಲೈ 5 ರ ಮಂಗಳವಾರ ತಡರಾತ್ರಿ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು.

ಏತನ್ಮಧ್ಯೆ, ತಮ್ಮ ವಿರುದ್ಧ ದಾಖಲಾದ ಅನೇಕ ಎಫ್ ಐಆರ್ ಗಳನ್ನು ಪ್ರಶ್ನಿಸಿ ರೋಹಿತ್ ರಂಜನ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಅಲ್ಲದೆ  ಗುರುವಾರ  ಈ ವಿಷಯವನ್ನು ತುರ್ತಾಗಿ ಪಟ್ಟಿ ಮಾಡಲು ಸುಪ್ರೀಂ ಕೋರ್ಟ್ ಒಪ್ಪಿಗೆ ಸೂಚಿಸಿದೆ.

Join Whatsapp
Exit mobile version