ರಾಹುಲ್ ಗಾಂಧಿಯ ವೀಡಿಯೋ ತಿರುಚಿ ಪ್ರಸಾರ: ಕ್ಷಮೆ ಕೇಳಿದ ಝೀ ನ್ಯೂಸ್, ಪ್ರಕರಣ ದಾಖಲು

Prasthutha|

ನವದೆಹಲಿ: ಉದಯಪುರ ಹತ್ಯೆಯ ಆರೋಪಿಗಳಿಗೆ ಕ್ಷಮೆ ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮನವಿಮಾಡಿ, ಹಂತಕರನ್ನು ‘ಮಕ್ಕಳು’ ಎಂದು ಕರೆದಿದ್ದಾರೆ ಎಂದು ತಿರುಚಿದ ವೀಡಿಯೋವನ್ನು ಪ್ರಸಾರ ಮಾಡಿದ್ದ ಝೀ ನ್ಯೂಸ್ ಸಾರ್ವಜನಿಕವಾಗಿ ಕ್ಷಮೆ ಕೇಳಿದೆ. ಈ ಮಧ್ಯೆ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.

- Advertisement -

ಸುಳ್ಳು ಸುದ್ದಿಯನ್ನು ಹರಡಿದ ಆರೋಪದ ಮೇಲೆ ಟಿವಿ ಸುದ್ದಿ ನಿರೂಪಕ, ಬಿಜೆಪಿ ರಾಷ್ಟ್ರೀಯ ವಕ್ತಾರ ರಾಜ್ಯವರ್ಧನ್ ರಾಥೋಡ್ ಮತ್ತು ಇತರರ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ.
ಝೀ ನ್ಯೂಸ್ ನ ಡಿಎನ್ ಎ ಎನ್ನುವ ಕಾರ್ಯಕ್ರಮದಲ್ಲಿ ನಿರೂಪಕ ‘ರಾಹುಲ್ ಗಾಂಧಿಯ ಪೂರ್ವಗ್ರಹವನ್ನು ಮತ್ತೊಮ್ಮೆ ನೋಡಿ. ಉದಯಪುರದ ಆರೋಪಿಗಳನ್ನು ಅವರು ಮಕ್ಕಳು ಎಂದು ಕರೆದಿದ್ದಾರೆ. ಅವರು ಮಕ್ಕಳೋ ಅಥವಾ ಆತಂಕವಾದಿಗಳೋ’ ಎಂದು ಹೇಳಿ ದುರುದ್ದೇಶಪೂರಿತವಾಗಿ ಉದಯಪುರ ಸುದ್ದಿಯನ್ನು ಯಾವುದೋ ಹಳೆಯ ವೀಡಿಯೋ ಗೆ ಲಿಂಕ್ ಮಾಡಿ ತಪ್ಪಾಗಿ ಪ್ರಸಾರ ಮಾಡಿದ್ದರು.


ಐಪಿಸಿ ಸೆಕ್ಷನ್ 504 (ಉದ್ದೇಶಪೂರ್ವಕ ಅವಮಾನ), 505 (ಅಪರಾಧ ಬೆದರಿಕೆ), 153 ಎ (ಧರ್ಮ, ಜನಾಂಗ, ಸ್ಥಳದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 295A (ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು, ಯಾವುದೇ ವರ್ಗದ ಧಾರ್ಮಿಕ ಭಾವನೆಗಳನ್ನು ಅದರ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಮೂಲಕ ಆಕ್ರೋಶಗೊಳಿಸುವ ಉದ್ದೇಶ) ಮತ್ತು 120B ಅಡಿಯಲ್ಲಿ ಸ್ಥಳೀಯ ಕಾಂಗ್ರೆಸ್ ಮುಖಂಡ ರಾಮ್ ಸಿಂಗ್ ಅವರು ಬಾನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನ ಮೇರೆಗೆ ಎಫ್ ಐಆರ್ ದಾಖಲಿಸಲಾಗಿದೆ.

Join Whatsapp