ರಾಹುಲ್ ಗಾಂಧಿ ಮಾತುಗಳು ಇಡೀ ದೇಶದಲ್ಲಿ ಕಂಪನ ಸೃಷ್ಟಿಸುತ್ತಿವೆ: ಸಿಎಂ ಎಂ.ಕೆ.ಸ್ಟಾಲಿನ್

Prasthutha|

ಚೆನ್ನೈ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಭಾಷಣಗಳು ಈ ದೇಶದಲ್ಲಿ ಕಂಪನ ಸೃಷ್ಟಿಸುತ್ತಿವೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಹೊಗಳಿದ್ದಾರೆ.

- Advertisement -


ತಮಿಳುನಾಡಿನ ಹಿರಿಯ ಕಾಂಗ್ರೆಸ್ ನಾಯಕ ಎ.ಗೋಪಣ್ಣ ಅವರು ದೇಶದ ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರೂ ಬಗ್ಗೆ ಬರೆದ ಪುಸ್ತಕವೊಂದನ್ನು ಚೆನ್ನೈನಲ್ಲಿ ಬಿಡುಗಡೆ ಮಾಡಿ ಮಾತನಾಡಿದ ಸ್ಟಾಲಿನ್, ‘ಈ ದೇಶದ ಸಂಸ್ಕೃತಿ, ಪರಂಪರೆ ಉಳಿಯಲು ಜವಾಹರ್ ಲಾಲ್ ನೆಹರೂ, ಮಹಾತ್ಮ ಗಾಂಧಿಯವರಂತಹ ನಾಯಕರು ಮತ್ತೆ ಬೇಕು’ ಎಂದು ಹೇಳಿದರು. ಹಾಗೇ, ರಾಹುಲ್ ಗಾಂಧಿಯನ್ನು ಹೊಗಳಿದ ತಮಿಳುನಾಡು ಸಿಎಂ ‘ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಭಾಷಣಗಳು ಈ ದೇಶದಲ್ಲಿ ಕಂಪನ ಸೃಷ್ಟಿಸುತ್ತಿವೆ’ ಎಂದರು.


‘ಪ್ರೀತಿಯ ಸಹೋದರ ರಾಹುಲ್ ಗಾಂಧಿಯವರು ಇಡೀ ದೇಶಾದ್ಯಂತ ಪಾದಯಾತ್ರೆ ನಡೆಸುತ್ತಿದ್ದಾರೆ. ಈ ಭಾರತ್ ಜೋಡೋ ಯಾತ್ರೆ ನಮ್ಮ ರಾಜ್ಯದ ಕನ್ಯಾಕುಮಾರಿಯಿಂದ ಪ್ರಾರಂಭವಾದ ಬಗ್ಗೆ ಸಂತೋಷವಿದೆ. ರಾಹುಲ್ ಗಾಂಧಿ ಮಾತುಗಳು ದೇಶದಲ್ಲಿ ಕಂಪನ ಉಂಟು ಮಾಡುತ್ತಿವೆ. ಅವರು ಚುನಾವಣಾ ರಾಜಕೀಯದ ಬಗ್ಗೆಯಾಗಲೀ, ಪಕ್ಷ ರಾಜಕಾರಣದ ಬಗ್ಗೆಯಾಗಲೀ ಮಾತನಾಡುತ್ತಿಲ್ಲ. ಕೇವಲ ಸಿದ್ಧಾಂತ ರಾಜಕಾರಣದ ಬಗ್ಗೆ ಮಾತನ್ನಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

Join Whatsapp