Home ಟಾಪ್ ಸುದ್ದಿಗಳು ಸಫಾರಿ ವೇಳೆ ಆನೆ ನರಳಾಟ: ಸಿಎಂ ಬೊಮ್ಮಾಯಿಗೆ ಪತ್ರ ಬರೆದ ರಾಹುಲ್ ಗಾಂಧಿ.!

ಸಫಾರಿ ವೇಳೆ ಆನೆ ನರಳಾಟ: ಸಿಎಂ ಬೊಮ್ಮಾಯಿಗೆ ಪತ್ರ ಬರೆದ ರಾಹುಲ್ ಗಾಂಧಿ.!

ಬೆಂಗಳೂರು: ಮೈಸೂರು ಸಮೀಪದ ನಾಗರಹೊಳೆ ರಾಷ್ಟ್ರೀಯ ಅರಣ್ಯದಲ್ಲಿ ತೀವ್ರವಾಗಿ ಗಾಯಗೊಂಡಿರುವ ಆನೆ ಮರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.

ನಾನು ರಾಜಕೀಯ ಗಡಿಗಳನ್ನು ದಾಟಿ ನಿಮ್ಮಲ್ಲಿ ಮನವಿ ಮಾಡಲು ಬಯಸುತ್ತೇನೆ ಎಂದು ಪತ್ರದಲ್ಲಿ ಬರೆದು, ಗಾಯಗೊಂಡ ಪುಟ್ಟ ಮರಿಯೊಂದಿಗೆ ಈ ಸುಂದರ ಆನೆ ಜೀವನ್ಮರಣ ಹೋರಾಟ ನಡೆಸುತ್ತಿರುವುದನ್ನು ನೋಡಿ ನನಗೆ ತುಂಬಾ ಬೇಸರವಾಯಿತು ಎಂದು ರಾಹುಲ್ ಕಳವಳ ವ್ಯಕ್ತಪಡಿಸಿದ್ದಾರೆ.

Join Whatsapp
Exit mobile version