ದೇಶದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ತೈಲ ಬೆಲೆ ಬಗ್ಗೆ ಕೇಂದ್ರ ಸರ್ಕಾರವನ್ನು ಲೇವಡಿ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, “ಕೇಂದ್ರ ಸರ್ಕಾರವು ತೈಲ ಬೆಲೆಯನ್ನು ಏರಿಕೆ ಮಾಡದ ದಿನವೇ ಅಪರೂಪ” ಎಂದು ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ಕೇಂದ್ರವು ತೈಲ ಬೆಲೆ ಏರಿಕೆ ಮಾಡದ ದಿನ ಅಪರೂಪವಾಗಿದೆ. ಪ್ರತಿ ದಿನವೂ ತೈಲ ಬೆಲೆಯನ್ನು ಹೆಚ್ಚಿಸಬೇಕು ಎನ್ನುವ ನಿಯಮವನ್ನು ಇದು ಸಾಬೀತುಪಡಿಸುತ್ತದೆ” ಎಂದಿದ್ದಾರೆ.ದೇಶದಲ್ಲಿ ದಿನೇ ದಿನೇ ತೈಲ ಬೆಲೆ ಏರಿಕೆಯಾಗುತ್ತಿದ್ದು, ಕರ್ನಾಟಕದ ಹಲವು ನಗರಗಳಲ್ಲಿ ಪೆಟ್ರೋಲ್ ದರ 100 ರೂ. ಕ್ಕಿಂತ ಹೆಚ್ಚಾಗಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ದರ 27 ಪೈಸೆ ಹಾಗೂ ಡೀಸೆಲ್ ದರ 28 ಪೈಸೆಗೆ ಹೆಚ್ಚಿದೆ. ಬೆಂಗಳೂರಿನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ಬೆಲೆ 100 ರೂ. ಹೆಚ್ಚಿದ್ದು, ಡೀಸೆಲ್ ಲೀಟರ್ ಬೆಲೆ 92.97 ರೂ. ಏರಿಕೆಯಾಗಿದೆ. ದೆಹಲಿಯಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 96.93 ರೂ. ಆಗಿದ್ದು, ಡೀಸೆಲ್ ದರ 87.69 ಆಗಿದೆ. ಮುಂಬೈಯಲ್ಲಿ ಪ್ರತೀ ಲೀಟರ್ ಪೆಟ್ರೋಲ್ ಬೆಲೆ 103.08 ರೂ ಆಗಿದ್ದು, ಡೀಸೆಲ್ ಬೆಲೆ 95.14 ರೂ. ಗೆ ಏರಿಕೆಯಾಗಿದೆ.
ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪೆನಿಗಳ ದರ ಏರಿಕೆ ಮಾಡಿದ್ದು, ಕರ್ನಾಟಕ, ಮಹಾರಾಷ್ಟ್ರ, ರಾಜಸ್ಥಾನ, ಆಂಧ್ರಪ್ರದೇಶ, ತೆಲಂಗಾಣ, ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಏಳು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶದಲ್ಲಿ ಪೆಟ್ರೋಲ್ ಬೆಲೆ ಶತಕ ತಲುಪಿದೆ.