ದ್ವೇಷದ ವಿಷವನ್ನು ಬಿತ್ತಿರುವಾಗ ಅಮೃತ ಮಹೋತ್ಸವಕ್ಕೆ ಅರ್ಥವಿದೆಯೇ?: ಅಸ್ಸಾಂ ಪೊಲೀಸರ ವಿರುದ್ಧ ರಾಹುಲ್ ಕಿಡಿ

Prasthutha|

ನವದೆಹಲಿ: ದೇಶದಲ್ಲಿ ದ್ವೇಷದ ವಿಷವನ್ನು ಬಿತ್ತುತ್ತಿರುವಾಗ ಅಮೃತ ಮಹೋತ್ಸವ ಎಂಬುದಕ್ಕೆ ಅರ್ಥವಿದೆಯೇ? ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

ಅಸ್ಸಾಂನ ದರಾಂಗ್ ಜಿಲ್ಲೆಯಲ್ಲಿ ಒತ್ತುವರಿ ತೆರವುಗೊಳಿಸುವ ವೇಳೆ ಪೊಲೀಸರು ಸ್ಥಳೀಯರ ಮೇಲೆ ನಡೆಸಿದ ಗುಂಡಿನ ದಾಳಿ ವಿರುದ್ಧ ರಾಹುಲ್ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ.

- Advertisement -

ಗುರುವಾರ ನಡೆದ ಹಿಂಸಾಚಾರದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಎದೆಗೆ ಗುಂಡೇಟು ತಗುಲಿ ಬಿದ್ದಿದ್ದ ವ್ಯಕ್ತಿಯ ಮೇಲೆ ಛಾಯಾಗ್ರಾಹಕನೊಬ್ಬ ಹಾರಿ, ನೆಗೆದು ಹಲ್ಲೆ ನಡೆಸುತ್ತಿರುವ ವೀಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿತ್ತು. ಸತ್ತು ಬಿದ್ದಿರುವ ವ್ಯಕ್ತಿಯ ಮೇಲೆ ನಡೆಸಿದ ದೌರ್ಜನ್ಯ ದ್ವೇಷದ ಪರಮಾವಧಿ ಎಂದು ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದರು.

- Advertisement -