ರಾಯಚೂರು: ಕೌಟುಂಬಿಕ ಕಲಹ ಹಿನ್ನೆಲೆ| ಒಂದೇ ಕುಟುಂಬದ ಮೂವರ ಬರ್ಬರ ಹತ್ಯೆ

Prasthutha|

ರಾಯಚೂರು: ಕೌಟುಂಬಿಕ ಕಲಹದ ಹಿನ್ನೆಲೆ ಒಂದೇ ಕುಟುಂಬದ ಮೂವರನ್ನು ಕೊಲೆ ಮಾಡಿರುವ ಘಟನೆ ರಾಯಚೂರಿನ ಹೊರವಲಯದ ಯರಮರಸ್ ಕ್ಯಾಂಪ್ನಲ್ಲಿ ನಡೆದಿದೆ.

- Advertisement -

ಕೊಲೆಯಾದವರನ್ನು ಸಂತೋಷ್(45) ವೈಷ್ಣವಿ(18) ಮತ್ತು ಆರತಿ(16)ಎಂದು ಗುರುತಿಸಲಾಗಿದೆ. ಸಂಬಂಧಿಯೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

 ರಾಯಚೂರು ಗ್ರಾಮೀಣ ಪೊಲೀಸರು ಘಟನಾ ಸ್ಥಳಕ್ಕೆ ದೌಡಾಯಿಸಿದ್ದಾರೆ. ಜೊತೆಗೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿ ಬಾಬು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.

Join Whatsapp
Exit mobile version