ನವದೆಹಲಿ: ಒಲಿಂಪಿಕ್ ಕುಸ್ತಿಪಟುಗಳಾದ ವಿನೇಶ್ ಫೋಗಟ್ ಹಾಗೂ ಬಜರಂಗ್ ಪುನಿಯಾ ಅವರ ರಾಜೀನಾಮೆಯನ್ನು ಭಾರತೀಯ ರೈಲ್ವೇ ಅಂಗೀಕರಿಸಿದೆ.
ಕಾಂಗ್ರೆಸ್ ಸೇರ್ಪಡೆಗೂ ಮುನ್ನ ಭಾರತೀಯ ರೈಲ್ವೆಯಲ್ಲಿನ ತಮ್ಮ ಹುದ್ದೆಗಳಿಗೆ ರಾಜೀನಾಮೆ ಸಲ್ಲಿಸಿದ್ದರು.
ಇದೀಗ ಕಾಂಗ್ರೆಸ್ ಸೇರ್ಪಡೆ ಬೆನ್ನಲ್ಲೇ ರಾಜೀನಾಮೆ ಅಂಗೀಕಾರಗೊಂಡಿದೆ.
ಇತ್ತೀಚಿಗಷ್ಟೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ನವದೆಹಲಿಯಲ್ಲಿ ಭೇಟಿಯಾದ ನಂತರ ಅವರ ರಾಜಕೀಯ ಪ್ರವೇಶದ ಬಗ್ಗೆ ಊಹಾಪೋಹಗಳು ವ್ಯಕ್ತವಾಗಿದ್ದವು. ಅದಾದ ಬಳಿಕ ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದರು. ಸೇರ್ಪಡೆಯಾದ ಬಳಿಕ ಕುಸ್ತಿಪಟು ವಿನೇಶ್ ಫೋಗಟ್ ಗೆ ಹರಿಯಾಣ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ನೀಡಿತ್ತು.