ಭಾರೀ ಮಳೆ: ಜೂ. 28ರಂದು ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ರಜೆ ಘೋಷಣೆ

Prasthutha|

- Advertisement -

ಮಂಗಳೂರು: ಭಾರೀ ಮಳೆ ಹಿನ್ನೆಲೆ ನಾಳೆ ( ಜೂ. 28)ರಂದು ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆಗಳಲ್ಲದೆ ಪದವಿ ಪೂರ್ವ ಕಾಲೇಜುಗಳಿಗೂ ಶುಕ್ರವಾರ ರಜೆ ಸಾರಲಾಗಿದೆ.

- Advertisement -

ಬುಧವಾರ ಬೆಳಗ್ಗಿನಿಂದಲೇ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಅಂಗನವಾಡಿ, ಪ್ರಾಥಮಿಕ ಪ್ರೌಢ ಶಾಲೆ ಹಾಗೂ ಪಿಯುಸಿ ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.

Join Whatsapp