ಆಂಧ್ರದಲ್ಲಿ ವಾಯುಭಾರ ಕುಸಿತ | ರಾಜ್ಯದಲ್ಲಿ ಮಳೆ ಮತ್ತಷ್ಟು ತೀವ್ರ

Prasthutha|

ಬೆಂಗಳೂರು: ಆಂಧ್ರದ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ರಾಜ್ಯದಲ್ಲಿ ಮತ್ತೆ ವರುಣನ ಆರ್ಭಟ ಮುಂದುವರೆದಿದೆ.ಕಳೆದ ಒಂದು ವಾರದಿಂದ ಅರಬ್ಬಿ ಸಮುದ್ರದ ಮೇಲ್ಮೈನಲ್ಲಿ ಸುಳಿಗಾಳಿಯಿಂದಾಗಿ ರಾಜ್ಯದಲ್ಲಿ ಸುರಿಯುತ್ತಿರುವ ಮಳೆಯ ಬೆನ್ನಲ್ಲೇ ಇದೀಗ ಆಂಧ್ರದಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ಮತ್ತೆ ಮಳೆಯ ತೀವ್ರತೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

- Advertisement -

ರಾಜ್ಯದ ಕರಾವಳಿ ಭಾಗಗಳಲ್ಲಿ ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಂಧ್ರಪ್ರದೇಶದ ಕರಾವಳಿ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದಲ್ಲಿ ಇನ್ನೂ ಮೂರ್ನಾಲ್ಕು ದಿನ ಮಳೆಯಾಗಲಿದೆ ಹವಾಮಾನ ಇಲಾಖೆಯ ಹವಾಮಾನ ತಜ್ಞ ಸದಾನಂದ ಅಡಿಗ ಮಾಹಿತಿ ನೀಡಿದ್ದಾರೆ.

ಕರಾವಳಿ ಜಿಲ್ಲೆಗಳಲ್ಲಿ ಇಂದು ಮತ್ತೆ ನಾಳೆ ಗುಡಗು ಸಹಿತ ಮಳೆಯಾಗಲಿದ್ದು ಎಚ್ಚರಿಕೆಯಿಂದ ಇರುವಂತೆ ಇಲಾಖೆ ಇದೇ ವೇಳೆ ಸೂಚಿಸಿದೆ.

- Advertisement -

ಕೊಡಗು, ಕೋಲಾರ,  ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಮಳೆಯ ನಿರೀಕ್ಷೆ ಇರುವುದರಿಂದ ಎರಡೂ ದಿನ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

Join Whatsapp