ಮಲೆನಾಡಲ್ಲಿ ಮಳೆಯ ಆರ್ಭಟ: ಹಳ್ಳದಲ್ಲಿ ಕೊಚ್ಚಿ ಹೋದ ಬಾಲಕಿ

Prasthutha|

ಚಿಕ್ಕಮಗಳೂರು: ತಾಲೂಕಿನ ಹೊಸಪೇಟೆ ಗ್ರಾಮದಲ್ಲಿ ಅಣ್ಣನ ಜೊತೆ ಶಾಲೆ ಮುಗಿಸಿ ಬರುವಾಗ 7 ವಯಸ್ಸಿನ‌ ವಿದ್ಯಾರ್ಥಿನಿಯೊಬ್ಬಳು ಹಳ್ಳದಲ್ಲಿ ಕೊಚ್ಚಿಕೊಂಡು ಹೋದ ಘಟನೆ ನಡೆದಿದೆ.

- Advertisement -

ಹೊಸಪೇಟೆ ಕಿರಿಯ ಪ್ರಾರ್ಥಮಿಕ ಶಾಲೆಯ ವಿದ್ಯಾರ್ಥಿನಿಯಾಗಿರುವ ಸುಪ್ರೀತಾ(7) ವಿದ್ಯಾರ್ಥಿನಿ ಹಳ್ಳದಲ್ಲಿ ಕೊಚ್ಚಿಹೋಗಿದ್ದು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬಾಲಕಿಗಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ.

Join Whatsapp