ಮಂಗಳೂರು: ಬಿಸಿಲಿನಿಂದ ಬಸವಳಿದಿದ್ದ ಜನತೆಗೆ ಮಳೆರಾಯ ತಂಪೆರೆದಿದ್ದು, ಬೆಳ್ಳಂಬೆಳಗ್ಗೆ ತುಂತುರು ಮಳೆಯ ಸಿಂಚನವಾಗಿದೆ.
ಸದ್ಯ ಮೋಡ ಕವಿದ ವಾತಾವರಣವಿದ್ದು, ನಗರದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಮುಂದಿನ 24 ಗಂಟೆಗಳಲ್ಲಿ ಕರಾವಳಿ ಸೇರಿದಂತೆ ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಸೋಮವಾರ ಎಚ್ಚರಿಕೆ ನೀಡಿತ್ತು.