ಬೆಂಗಳೂರು ಸಹಿತ ರಾಜ್ಯದ ಹಲವೆಡೆ ತಂಪೆರೆದ ಮಳೆರಾಯ

Prasthutha|

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮ ಬೆಂಗಳೂರು ನಗರ ಸಹಿತ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆರಾಯ ತಂಪೆರೆದಿದ್ದಾನೆ.

- Advertisement -

ನಗರದ ವಿಜಯನಗರ, ಕಾಮಾಕ್ಷಿ ಪಾಳ್ಯ, ಕೆಂಗೇರಿ, ಯಶವಂತಪುರ ಸುಂಕದಕಟ್ಟೆ, ಮೈಸೂರು ರೋಡ್ ಸೇರಿದಂತೆ ಹಲವೆಡೆ ಸಾಧಾರಣ ಮಳೆಯಾಗಿದೆ. ಅಲ್ಲದೇ ರಾಜ್ಯದ ಇತರೆ ಜಿಲ್ಲೆಗಳಾದ ಹಾಸನ, ಹಾವೇರಿ, ಚಿಕ್ಕೋಡಿ, ಮಡಿಕೇರಿ ಸೇರಿದಂತೆ ಕೆಲವೆಡೆ ಉತ್ತಮ ಮಳೆಯಾಗಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಇದು ಚಂಡಮಾರುತವಾಗಿ ಬದಲಾವಣೆಯಾಗುವ ನಿರೀಕ್ಷೆ ಇದೆ, ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ನೆನ್ನೆ ಮುನ್ಸೂಚನೆ ನೀಡಿತ್ತು.

Join Whatsapp