ಮಂಗಳೂರು: ಕರಾವಳಿ ಸೇರಿ ರಾಜ್ಯಾದ್ಯಂತ ಮುಂದಿನ ಒಂದು ವಾರ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಭಾಗದಲ್ಲಿ ಇಂದು (ಸೆ.01) ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉತ್ತರ ಒಳನಾಡಿನಲ್ಲೂ ಯಲ್ಲೋ ಅಲರ್ಟ್ ಘೋಷಣೆಯಾಗಿದೆ. ರಾಜ್ಯದ ದಕ್ಷಿಣ ಒಳನಾಡಿನಲ್ಲೂ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆಯಾಗಿದೆ. ರಾಜ್ಯದಲ್ಲಿ ವಾಡಿಕೆಗಿಂತ ಶೇ 22 ರಷ್ಟು ಕಡಿಮೆ ಮಳೆಯಾಗಿದೆ. ಸೆಪ್ಟೆಂಬರ್ ತಿಂಗಳಲ್ಲಿ ವಾಡಿಕೆ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.