ಕರಾವಳಿ ಜಿಲ್ಲೆಗಳಲ್ಲಿ ಎರಡು ದಿನ ಮಳೆ ಸಾಧ್ಯತೆ

Prasthutha|

- Advertisement -

ಮಂಗಳೂರು: ಮುಂದಿನ ಎರಡು ದಿನ ರಾಜ್ಯದ ಕರಾವಳಿಯಲ್ಲಿ‌ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಮಳೆಯಾಗಲಿದ್ದು, ಗಂಟೆಗೆ 30-40 ಕಿ.ಮೀ. ವೇಗದಲ್ಲಿ ಗಾಳಿ ಜೊತೆ ಮಳೆ ಸಾಧ್ಯತೆಯಿದೆ.

- Advertisement -

ದಕ್ಷಿಣ ಒಳನಾಡಿನ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮಳೆಯಾಗುವ ಸಂಭವವಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಸೆ.14ರವರೆಗೆ ಹೆಚ್ಚಿನ ಮಳೆಯಾಗಲಿದ್ದು, ಹಳದಿ ಅಲರ್ಟ್​ ಘೋಷಿಸಲಾಗಿದೆ.

ಜೊತೆಗೆ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರದಲ್ಲಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ.



Join Whatsapp