ಎರಡು ದಿನ ಕರಾವಳಿಯಲ್ಲಿ ಮಳೆ ಸಾಧ್ಯತೆ: ಎಲ್ಲೋ ಅಲರ್ಟ್ ಘೋಷಣೆ

Prasthutha|

ಮಂಗಳೂರು: ಮುಂದಿನ ಎರಡು ದಿನಗಳ ಕರಾವಳಿ ಭಾಗದ ಕೆಲವು ಪ್ರದೇಶದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

- Advertisement -


ಹೀಗಾಗಿ ಕರಾವಳಿಯಲ್ಲಿ ಏ.7 ರಂದು ಎಲ್ಲೋ ಅಲರ್ಟ್ ಘೋಷಿಸಲಾಗಿದೆ.


ಇದಲ್ಲದೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಏಪ್ರಿಲ್ 10ರವರೆಗೆ ಭಾರಿ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

- Advertisement -


ಶುಕ್ರವಾರ ಮಳೆ ಸುರಿಸುವ ಮಾರುತಗಳು ಹೆಚ್ಚು ಚುರುಕಾಗಿರಲಿವೆ. ಹೀಗಾಗಿ ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಹಲವು ಕಡೆಗಳಲ್ಲಿ ಗುಡುಗು ಸಹಿತ ಅಧಿಕ ಮಳೆ ಆಗುವ ಸಾಧ್ಯತೆ ಇದೆ.

Join Whatsapp