Home ಕರಾವಳಿ ಎರಡು ದಿನ ಕರಾವಳಿಯಲ್ಲಿ ಮಳೆ ಸಾಧ್ಯತೆ: ಎಲ್ಲೋ ಅಲರ್ಟ್ ಘೋಷಣೆ

ಎರಡು ದಿನ ಕರಾವಳಿಯಲ್ಲಿ ಮಳೆ ಸಾಧ್ಯತೆ: ಎಲ್ಲೋ ಅಲರ್ಟ್ ಘೋಷಣೆ

ಮಂಗಳೂರು: ಮುಂದಿನ ಎರಡು ದಿನಗಳ ಕರಾವಳಿ ಭಾಗದ ಕೆಲವು ಪ್ರದೇಶದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


ಹೀಗಾಗಿ ಕರಾವಳಿಯಲ್ಲಿ ಏ.7 ರಂದು ಎಲ್ಲೋ ಅಲರ್ಟ್ ಘೋಷಿಸಲಾಗಿದೆ.


ಇದಲ್ಲದೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಏಪ್ರಿಲ್ 10ರವರೆಗೆ ಭಾರಿ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.


ಶುಕ್ರವಾರ ಮಳೆ ಸುರಿಸುವ ಮಾರುತಗಳು ಹೆಚ್ಚು ಚುರುಕಾಗಿರಲಿವೆ. ಹೀಗಾಗಿ ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಹಲವು ಕಡೆಗಳಲ್ಲಿ ಗುಡುಗು ಸಹಿತ ಅಧಿಕ ಮಳೆ ಆಗುವ ಸಾಧ್ಯತೆ ಇದೆ.

Join Whatsapp
Exit mobile version