Home ಟಾಪ್ ಸುದ್ದಿಗಳು ಮುಂದಿನ 24 ಗಂಟೆಗಳಲ್ಲಿ ಕರಾವಳಿಯಲ್ಲಿ ಮಳೆ ಸಾಧ್ಯತೆ

ಮುಂದಿನ 24 ಗಂಟೆಗಳಲ್ಲಿ ಕರಾವಳಿಯಲ್ಲಿ ಮಳೆ ಸಾಧ್ಯತೆ

►ಚಿಕ್ಕಮಗಳೂರು, ಕೊಡಗಿನಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಮುಂದಿನ 24 ಗಂಟೆಗಳಲ್ಲಿ ಚಿಕ್ಕಮಗಳೂರು ಹಾಗೂ ಕೊಡಗಿನಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹೇಳಿದೆ.

ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ, ಕೊಪ್ಪಳ, ಹಾವೇರಿ, ಗದಗ, ಧಾರವಾಡದಲ್ಲೂ ಮಳೆಯಾಗಲಿದೆ.

Join Whatsapp
Exit mobile version