ಮಂಗಳೂರು: ದ.ಕ. ಜಿಲ್ಲೆ ಸೇರಿದಂತೆ ಕರಾವಳಿಯ ಕೆಲವೆಡೆ ಸೆಪ್ಟೆಂಬರ್ 18ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು,ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ನೈಋತ್ಯ ಮುಂಗಾರು ದಕ್ಷಿಣ ಒಳನಾಡಿನಲ್ಲಿ ದುರ್ಬಲವಾಗಿತ್ತಯ, ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು. ಕರಾವಳಿಯಲ್ಲಿ ವ್ಯಾಪಕವಾಗಿ ಮತ್ತು ಒಳನಾಡಿನಲ್ಲಿ ಕೆಲವು ಕಡೆಗಳಲ್ಲಿ ಮಳೆಯಾಗಿದೆ. ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.