ದ.ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ: ಹವಾಮಾನ ಇಲಾಖೆಯಿಂದ ಮುನ್ಸೂಚನೆ

Prasthutha|

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ ಮಾ,23ರವರೆಗೆ ಮಳೆ ಸುರಿಯುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಮೂರು ಜಿಲ್ಲೆಗಳಲ್ಲಿ ಸಾಧಾರಣ ರೀತಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.

- Advertisement -

ಮಾರ್ಚ್ 20ರಿಂದ 23ರವರೆಗೆ ಮೂರು ಜಿಲ್ಲೆಗಳಲ್ಲಿ ಮಳೆ ಬೀಳುವ ಸಾಧ್ಯತೆ ಇದೆ. ಮೂರೂ ಜಿಲ್ಲೆಗಳಲ್ಲಿ 2.5ಮಿ.ಮೀನಿಂದ 64.5ಮಿ.ಮೀ. ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಈ ಕುರಿತು ಮೂರು ಜಿಲ್ಲೆಗಳಿಗೆ ಯಾವುದೇ ಎಚ್ಚರಿಕೆಯನ್ನು ನೀಡಲಾಗಿಲ್ಲ.

Join Whatsapp