ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ ಮಾ,23ರವರೆಗೆ ಮಳೆ ಸುರಿಯುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಮೂರು ಜಿಲ್ಲೆಗಳಲ್ಲಿ ಸಾಧಾರಣ ರೀತಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ಮಾರ್ಚ್ 20ರಿಂದ 23ರವರೆಗೆ ಮೂರು ಜಿಲ್ಲೆಗಳಲ್ಲಿ ಮಳೆ ಬೀಳುವ ಸಾಧ್ಯತೆ ಇದೆ. ಮೂರೂ ಜಿಲ್ಲೆಗಳಲ್ಲಿ 2.5ಮಿ.ಮೀನಿಂದ 64.5ಮಿ.ಮೀ. ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಈ ಕುರಿತು ಮೂರು ಜಿಲ್ಲೆಗಳಿಗೆ ಯಾವುದೇ ಎಚ್ಚರಿಕೆಯನ್ನು ನೀಡಲಾಗಿಲ್ಲ.