ಭಾರೀ ಗಾಳಿ, ಮಳೆ ಸಾಧ್ಯತೆ: ಕರಾವಳಿ, ಕೊಡಗಿನಲ್ಲಿ ಎಲ್ಲೋ ಅಲರ್ಟ್ ಘೋಷಣೆ

Prasthutha|

- Advertisement -

ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದಲೂ ಎಡೆಬಿಡದೆ ಸುರಿಯುತ್ತಿರುವ ಮಳೆಯ ಕುರಿತು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಉಡುಪಿ, ದಕ್ಷಿಣ ಕನ್ನಡ ಮಾತ್ರವಲ್ಲದೇ ಕೊಡಗು ಜಿಲ್ಲೆಯಲ್ಲಿ ಇಂದು ಭಾರೀ ಮಳೆಯಾಗಲಿದ್ದು, ನಾಳೆ ಭಾರೀ ಗಾಳಿ ಬೀಸಲಿದೆ. ಅಲ್ಲದೇ ಜುಲೈ 13ರಿಂದ ಮತ್ತೆ ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

- Advertisement -

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿತ್ತು. ನಿನ್ನೆಯ ವರೆಗೂ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗಿತ್ತು. ಬಹುತೇಕ ಕಡೆಗಳಲ್ಲಿ ಮನೆಗಳಿಗೆ ನೀರು ನುಗ್ಗಿದ ಹಿನ್ನೆಲೆಯಲ್ಲಿ ಸಾಕಷ್ಟು ಕುಟುಂಬಗಳನ್ನು ಜಿಲ್ಲಾಡಳಿತಗಳು ಸ್ಥಳಾಂತರ ಮಾಡಿತ್ತು. ಅಲ್ಲದೇ ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿತ್ತು.
ಉಡುಪಿ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಮಳೆರಾಯ ಕೊಂಚ ಬಿಡುವು ಕೊಟ್ಟಿದೆ. ಆದರೆ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯ ಪ್ರಕಾರ ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಸೇರಿದಂತೆ ಕರಾವಳಿ ಹಾಗೂ ಕೊಡಗು ಜಿಲ್ಲೆಯಲ್ಲಿ ಭಾರೀ ಪ್ರಮಾಣದಲ್ಲಿ ಇಂದು ಮಳೆಯಾಗಲಿದೆ ಎಂದಿದೆ. ನಾಳೆ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಪ್ರಮಾಣದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.



Join Whatsapp