Home ಟಾಪ್ ಸುದ್ದಿಗಳು ಮಂಗಳೂರು | ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ: ಕರಾವಳಿಯಲ್ಲಿ ಮೂರು ದಿನ ಮಳೆ ಸಾಧ್ಯತೆ

ಮಂಗಳೂರು | ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ: ಕರಾವಳಿಯಲ್ಲಿ ಮೂರು ದಿನ ಮಳೆ ಸಾಧ್ಯತೆ

ಮಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣ ಮಂಗಳೂರು ನಗರ ಸೇರಿದಂತೆ ಕರಾವಳಿಯಲ್ಲಿ ತುಂತುರು ಮಳೆಯಾಗುತ್ತಿದೆ.

ಇನ್ನು ಮುಂದಿನ 3-4 ದಿನ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣ ದಕ್ಷಿಣ ತಮಿಳುನಾಡು, ಕೇರಳ, ಕರ್ನಾಟಕದ ಕರಾವಳಿ ಮತ್ತು ಲಕ್ಷದ್ವೀಪದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯಿದೆ ಎಂದು ತಿಳಿಸಿದೆ.

ಅಲ್ಲದೆ, ಅರಬ್ಬಿ ಸಮುದ್ರದಲ್ಲಿ ಗಂಟೆ ಕರಾವಳಿಯಲ್ಲಿ 40-55ಕಿಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ.

Join Whatsapp
Exit mobile version