Home ಕರಾವಳಿ ಕರಾವಳಿ ಸೇರಿ ರಾಜ್ಯದಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆ ಸಾಧ್ಯತೆ

ಕರಾವಳಿ ಸೇರಿ ರಾಜ್ಯದಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆ ಸಾಧ್ಯತೆ

ಬೆಂಗಳೂರು: ಕರಾವಳಿ ಸೇರಿ ರಾಜ್ಯದಲ್ಲಿ ಇನ್ನು ಎರಡು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು (ಮೇ.21) ಮತ್ತು ನಾಳೆ (ಮೇ.22) ರಾಜ್ಯಾದ್ಯಂತ ಮಳೆಯಾಗಲಿದೆ ಹವಾಮಾನ ಇಲಾಖೆ ಹೇಳಿದೆ.

ಇಂದು ನಗರದ ಹಲವೆಡೆ ಮೋಡಕವಿದ ವಾತಾವರಣ ಇರಲಿದ್ದು, ಸಂಜೆ ವೇಳೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿಯ ದಕ್ಷಿಣ ಕನ್ನಡ, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಚಿತ್ರದುರ್ಗ, ಕೋಲಾರ, ಮೈಸೂರು, ಚಾಮರಾಜನಗರ, ಕೊಡಗು, ಚಿಕ್ಕಮಗಳೂರು, ತುಮಕೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ.

Join Whatsapp
Exit mobile version