ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಭಾನುವಾರ ಅಸಾನಿ ಚಂಡಮಾರುತವಾಗಿ ಸೃಷ್ಟಿಯಾಗಿದ್ದು, ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಆಂಧ್ರಪ್ರದೇಶ, ಪಶ್ಚಿಮ ಬಂಗಾಳ ಹಾಗೂ ಕರಾವಳಿ ಓರಿಸ್ಸಾದತ್ತ ಮಾರುತಗಳು ಚಲಿಸಲಿದ್ದು, ಆ ಭಾಗಗಳಲ್ಲಿ ಹೆಚ್ಚು ಮಳೆ ಬೀಳಲಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಬೆಂಗಳೂರು, ಬೆಂ.ಗ್ರಾಮಾಂತರ, ಕೋಲಾರ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ದಾವಣಗೆರೆ, ಚಿತ್ರದುರ್ಗ, ಹಾವೇರಿ, ಬಳ್ಳಾರಿ, ಗದಗ, ಧಾರವಾಡ, ಬೆಳಗಾವಿ, ಕೊಪ್ಪಳ, ಬಾಗಲಕೋಟೆ, ಕಲಬುರಗಿ ಮತ್ತು ಬೀದರ್ ನಲ್ಲಿ ಮೇ 9ರಂದು ಭಾರಿ ಮಳೆ ಸುರಿಯಲಿದೆ.
ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.