ಕೊಡಗು: ರಾಜ್ಯದಲ್ಲಿ ತಾಪಮಾನ ಏರಿಕೆಯಾಗುತ್ತಿದ್ದು, ಜನ ತತ್ತರಿಸಿ ಹೋಗುತ್ತಿದ್ದಾರೆ. ಆದರೆ ಕೊಡಗು ಜಿಲ್ಲೆಯ ವಿವಿಧೆಡೆ ಮಳೆ ಸುರಿದಿದೆ.
ಚೇರಂಬಾಣೆ, ನಾಪೋಕ್ಲು, ಎಮ್ಮೆಮಾಡು, ನೆಲಜಿ, ಕಾರುಗುಂದ, ಕಡಿಯತ್ತೂರು ಸುತ್ತಮುತ್ತಲ ಗ್ರಾಮಗಳಲ್ಲಿ ಸಾಧಾರಣ ಮಳೆಯಾಗಿದೆ.
ರಾಜ್ಯದಲ್ಲಿ ಇಂದು ತಾಪಮಾನದಿಂದ ತತ್ತರಿಸುತ್ತಿದ್ದು, ಕಲಬುರಗಿ ಜಿಲ್ಲೆಯಲ್ಲಿ ಬರೋಬ್ಬರಿ 43.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ದಕ್ಷಿಣ ಕನ್ನಡದಲ್ಲಿ ತಾಪಮಾನ ಇಂದು 40 ಡಿಗ್ರಿ ಸೆಲ್ಸಿಯಸ್ ತನಕ ಏರಿಕೆಯಾಗಿತ್ತು.