ಬೆಂಗಳೂರು: ಕರಾವಳಿ ಸೇರಿದಂತೆ ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ರಾಜ್ಯದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ಮುನ್ಸೂಚನೆ ನೀಡಿದ್ದಾರೆ.
ಮಹಾರಾಷ್ಟ್ರದ ಮಧ್ಯ ಕರಾವಳಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆ ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. 24 ರಿಂದ 28 ರವರೆಗೆ ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಭಾಗದಲ್ಲಿ 24, 25 ರಂದು ಗುಡುಗು ಸಿಡಿಲಿನ ಎಚ್ಚರಿಕೆ ನೀಡಲಾಗಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂ.ನಗರ, ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಹಾಸನ, ಕೊಡಗು, ಮೈಸೂರು, ತುಮಕೂರು ಜಿಲ್ಲೆಯಲ್ಲಿ 24 ರಿಂದ 26 ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದಾರೆ.