Home ಟಾಪ್ ಸುದ್ದಿಗಳು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಮೂರು ದಿನ ಮಳೆ ಸಾಧ್ಯತೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಮೂರು ದಿನ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ ಇನ್ನೂ ಮೂರು ದಿನ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಸೋಮವಾರ ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸುರಿದಿದೆ. ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗದಲ್ಲಿ ಮಾರ್ಚ್ 22ರಿಂದ 24ರ ವರೆಗೆ, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಮಾರ್ಚ್ 23ರಂದು ಭಾರಿ ಮಳೆಯಾಗಲಿದೆ ಎಂದು ಹೇಳಿದೆ.

Join Whatsapp
Exit mobile version