ಮುಂದಿನ 2 ದಿನ ರಾಜ್ಯಾದ್ಯಂತ ಮಳೆ ಸಾಧ್ಯತೆ

Prasthutha|

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯ ಪರಿಣಾಮ ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಮುಂದಿನ ಎರಡು ದಿನಗಳ ಕಾಲ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

- Advertisement -

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದು ವ್ಯಾಪಕ ಮಳೆ ಸುರಿಯಲಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ಕೊಡಗು, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಮಳೆ ಹೆಚ್ಚಾಗುವ ನಿರೀಕ್ಷೆಯಿದೆ.

Join Whatsapp
Exit mobile version