ಮಲೆನಾಡಿನಲ್ಲಿ ಮುಂದುವರಿದ ಮಳೆ: ಶೃಂಗೇರಿ, ಕಳಸ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ.

Prasthutha|

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಮುಂದುವರಿದಿದ್ದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ.ಎನ್.ರಾಜೇಶ್ ಅವರು
ಶೃಂಗೇರಿ, ಕಳಸ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಿದ್ದಾರೆ.

- Advertisement -

ಜುಲೈ 5 ಹಾಗೂ 6ರಂದು ಡಿಸಿ ಅವರು ಒಂದರಿಂದ ಹತ್ತನೇ ತರಗತಿವರೆಗೂ ರಜೆ ಘೋಷಿಸಿ ಆದೇಶ ಹೊರಡಿಸಿದ್ದು, ಮೂಡಿಗೆರೆ ತಾಲೂಕಿನ ಬಾಳೂರು ಹೋಬಳಿ ವ್ಯಾಪ್ತಿಯ ಶಾಲೆಗಳಿಗೂ ರಜೆ ಘೋಷಿಸಲಾಗಿದೆ.

ಹಳ್ಳ ಕೊಳಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ
ಮುಂಜಾಗ್ರತಾ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿಯವರು ಹೇಳಿದ್ದಾರೆ.

Join Whatsapp