26 ವರ್ಷಗಳ ಹಿಂದೆ ಮತಗಟ್ಟೆ ಅಧಿಕಾರಿಗೆ ಹಲ್ಲೆ: ಹಿರಿಯ ಕಾಂಗ್ರೆಸ್ ಮುಖಂಡ ರಾಜ್ ಬಬ್ಬರ್’ಗೆ ಎರಡು ವರ್ಷ ಜೈಲು

Prasthutha|

ನವದೆಹಲಿ: 1996ರಲ್ಲಿ ಮತಗಟ್ಟೆ ಅಧಿಕಾರಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಬಾಲಿವುಡ್ ನಟ, ಕಾಂಗ್ರೆಸ್ ಮುಖಂಡ ರಾಜ್ ಬಬ್ಬರ್ ಅವರಿಗೆ ನ್ಯಾಯಾಲಯ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದೆ.

- Advertisement -

ಅಧಿಕಾರಿಗೆ ತನ್ನ ಕರ್ತವ್ಯವನ್ನು ನಿರ್ವಹಿಸದಂತೆ ತಡೆದ ಮತ್ತು ಇತರೆ ಮೂರು ಅಪರಾಧ ಕೃತ್ಯಗಳಿಗಾಗಿ ಬಬ್ಬರ್ ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ಮತ್ತು 8,500 ರೂ. ದಂಡವನ್ನು ವಿಧಿಸಿದೆ ಎಂದು ನ್ಯಾಯಾಲಯವು ತನ್ನ ಆದೇಶದಲ್ಲಿ ಉಲ್ಲೇಖಿಸಿದೆ.

ಮೇ 1996 ರ ಮೇ ತಿಂಗಳಲ್ಲಿ ನಡೆದ ಚುನಾವಣೆಯ ವೇಳೆ ಮತಗಟ್ಟೆ ಅಧಿಕಾರಿ, ಬಬ್ಬರ್ ವಿರುದ್ಧ ವಝೀರ್’ಗಂಜ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಇದರನ್ವಯ ಪೊಲೀಸರು ಪ್ರಕರಣ ದಾಖಲಿಸಿದ್ದರು. ಆಗ ಅವರು ಸಮಾಜವಾದಿ ಪಕ್ಷದಿಂದ ಚುನಾವಣೆಗೆ ಸ್ಪರ್ಧಿಸಿದ್ದರು.



Join Whatsapp