ಬೆಂಗಳೂರು: ರಾಜಭವನ ಬಿಜೆಪಿ ಕಚೇರಿಯಾಗಿದೆ. ರಾಜ್ಯಪಾಲರು ಪಕ್ಷಪಾತ ಧೋರಣೆ ಅನುಸರಿಸುತ್ತಿದ್ದಾರೆ ಎಂದು ವಿಧಾನ ಪರಿಷತ್ ನ ಮುಖ್ಯ ಸಚೇತಕ ಸಲೀಂ ಅಹಮದ್ ಕಿಡಿಕಾರಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಯಾರೋ ಒಬ್ಬ ಸಂಶಯಾಸ್ಪದ ಗುಣ ಇರುವ ವ್ಯಕ್ತಿ ರಾಜ್ಯಪಾಲರಿಗೆ ಪತ್ರ ಬರೆಯುತ್ತಾರೆ. ರಾಜ್ಯಪಾಲರು ಆ ಪತ್ರದ ಆಧಾರದಲ್ಲಿ 12 ಗಂಟೆಯೊಳಗೆ ಸಿಎಂ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ಕೊಡುತ್ತಾರೆ. ಇದು ರಾಜ್ಯಪಾಲರ ದುರಂತದ ನಡೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಾಜ್ಯಪಾಲರ ಬಳಿ ದೂರು ಬಂದ ಕೂಡಲೇ ಮುಖ್ಯ ಕಾರ್ಯದರ್ಶಿಗಳಿಗೆ ವಿವರಣೆ ಕೇಳಿ ಕಳಿಸಿಕೊಡುತ್ತಾರೆ. ರಾಜ್ಯಪಾಲರು ಪಕ್ಷಪಾತ ಮಾಡುತ್ತಿದ್ದಾರೆ. ರಾಜ್ಯಪಾಲರು ಪಕ್ಷಪಾತ ಮಾಡಬಾರದು. ರಾಜಭವನ ಒಂದು ಪವಿತ್ರವಾದ ಜಾಗ. ಅಲ್ಲಿ ಯಾವುದೇ ರಾಜಕಾರಣ ಮಾಡಬಾರದು. ರಾಜಭವನ ರಾಜಕೀಯ ಮೀರಿ ಇರಬೇಕು. ಆದರೆ ರಾಜಭವನದಲ್ಲಿ ರಾಜಕೀಯ ನಡೆಯುತ್ತಿದೆ. ರಾಜಭವನ ಬಿಜೆಪಿ ಕಚೇರಿ ಆಗಿದೆ ಎಂದು ರಾಜ್ಯಪಾಲರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ