ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿಗೆ ಜಯ | ಕಾಂಗ್ರೆಸ್ ಗೆ ಮುಖಭಂಗ

Prasthutha|

ಜೈಪುರ : ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಜಯಭೇರಿಸಿದ್ದು, ಆಡಳಿತಾರೂಢ ಕಾಂಗ್ರೆಸ್ ಗೆ ಮುಖಭಂಗವಾಗಿದೆ. 4,371 ಪಂಚಾಯತ್ ಸಮಿತಿ ಸ್ಥಾನಗಳ ಪೈಕಿ ಬಿಜೆಪಿ 1,835, ಕಾಂಗ್ರೆಸ್ 1,718 ಸ್ಥಾನಗಳಲ್ಲಿ ವಿಜಯ ಸಾಧಿಸಿದೆ.

ರಾಷ್ಟ್ರೀಯ ಲೋಕತಾಂತ್ರಿಕ ಪಕ್ಷದ 56 ಮಂದಿ, 420 ಪಕ್ಷೇತರ ಅಭ್ಯರ್ಥಿಗಳು ಗೆಲುವು ಪಡೆದಿದ್ದಾರೆ. ಜಿಲ್ಲಾ ಪರಿಷತ್ ನ ಒಟ್ಟು 636 ಸ್ಥಾನಗಳಲ್ಲಿ ಬಿಜೆಪಿ 266, ಕಾಂಗ್ರೆಸ್ 204 ಸ್ಥಾನಗಳನ್ನು ಗೆದ್ದುಕೊಂಡಿದೆ.

- Advertisement -

ಕೆಲವೆಡೆ ಇನ್ನೂ ಮತ ಎಣಿಕೆ ಮುಂದುವರಿದಿದೆ. ಗ್ರಾಮ ಪಂಚಾಯತ್ ಮತ್ತು ಜಿಲ್ಲಾ ಪರಿಷತ್ ಚುನಾವಣೆಗಳು ಏಕಕಾಲದಲ್ಲಿ ನಡೆದಿದ್ದವು.

- Advertisement -