Home ಟಾಪ್ ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹಿಜಾಬ್ ಬಗ್ಗೆ ಆಕ್ಷೇಪಾರ್ಹ ಪೋಸ್ಟ್ । ಇಬ್ಬರು ಪೊಲೀಸ್ ಅಧಿಕಾರಿಗಳ ಅಮಾನತು

ಸಾಮಾಜಿಕ ಜಾಲತಾಣಗಳಲ್ಲಿ ಹಿಜಾಬ್ ಬಗ್ಗೆ ಆಕ್ಷೇಪಾರ್ಹ ಪೋಸ್ಟ್ । ಇಬ್ಬರು ಪೊಲೀಸ್ ಅಧಿಕಾರಿಗಳ ಅಮಾನತು

ಜೈಪುರ: ದೇಶಾದ್ಯಂತ ಹಿಜಾಬ್ ಸಂಘರ್ಷ ತೀವ್ರ ಸ್ವರೂಪ ಪಡೆಯುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಪೋಸ್ಟನ್ನು ಹಂಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಸಿಬ್ಬಂಧಿಗಳನ್ನು ಅಮಾನತುಗೊಳಿಸಿದ ಘಟನೆ ರಾಜಸ್ಥಾನದಲ್ಲಿ ನಡೆದಿದೆ.

ಜವಾಹರ್ ಸರ್ಕಲ್ ಪೊಲೀಸ್ ಠಾಣೆಯಲ್ಲಿ ಕಾನ್ ಸ್ಟೇಬಲ್ ರಮೇಶ್ ಆಕ್ಷೇಪಾರ್ಹ ಪೋಸ್ಟನ್ನು ಹಂಚಿಕೊಂಡಿದ್ದಾರೆ ಮತ್ತು ಟ್ರಾಫಿಕ್ ವಿಭಾಗದ ಎ.ಎಸ್.ಐ ಸತ್ವೀರ್ ಸಿಂಗ್ ಇತರರಿಗೆ ರವಾನಿಸಿದ ಆರೋಪದಲ್ಲಿ ಈ ಇಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಫೋಟೋ ಮತ್ತು ಕಮೆಂಟ್ ಮಾಡಿದ್ದಕ್ಕಾಗಿ ಇಬ್ಬರು ಪೊಲೀಸರನ್ನು ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ. ಪೊಲೀಸ್ ಅಧಿಕಾರಿಗಳಾಗಿ ಈ ರೀತಿಯ ವರ್ತನೆ ಪ್ರದರ್ಶಿಸಿದಕ್ಕಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಉಪ ಪೊಲೀಸ್ ಆಯುಕ್ತರಾದ ಅನಿಲ್ ಪ್ಯಾರಿಸ್ ದೇಶ್ ಮುಖ್ ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಾಥಮಿಕ ತನಿಖೆ ಆರಂಭಿಸಿದ್ದಾರೆ ಎಂದು ಹಿರಿಯ ಅಧಿಕಾರಿ ದೇಶ್ ಮುಖ್ ಮಾಧ್ಯಮಕ್ಕೆ ತಿಳಿಸಿದ್ದಾರೆ.

Join Whatsapp
Exit mobile version