ರಾಜಸ್ಥಾನ: 7 ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್

Prasthutha|

ಜೈಪುರ: ರಾಜಸ್ಥಾನ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ಮಂಗಳವಾರ ಬಿಡುಗಡೆ ಮಾಡಿದೆ.

- Advertisement -


ಪ್ರಣಾಳಿಕೆಯಲ್ಲಿ ರಾಜಸ್ಥಾನದ ಜನರಿಗೆ 7 ಗ್ಯಾರಂಟಿ ಘೋಷಿಸಿದ್ದು ಜೊತೆಗೆ ಜಾತಿ ಸಮೀಕ್ಷೆ ನಡೆಸಿ ಬಿಡುಗಡೆ ಮಾಡುವ ಭರವಸೆ ನೀಡಲಾಗಿದೆ.


ಕರ್ನಾಟಕದ ಮಾದರಿಯಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ಕುಟುಂಬದ ಮಹಿಳಾ ಮುಖ್ಯಸ್ಥರಿಗೆ ವಾರ್ಷಿಕ 10,000 ರೂ. ನೀಡುವುದಾಗಿ ಕಾಂಗ್ರೆಸ್ ಹೇಳಿದೆ. ಗೊಧನ್ ಯೋಜನೆಯಡಿ ಸರ್ಕಾರವು ಹಸುವಿನ ಸಗಣಿ ಪ್ರತಿ ಕೆಜಿಗೆ 2 ರೂ.ಯಲ್ಲಿ ಖರೀದಿ ಮಾಡಲಾಗುವುದು. ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್/ಟ್ಯಾಬ್ಲೆಟ್ ವಿತರಿಸಲಾಗುವುದು ಎಂದು ಹೇಳಿದೆ.

- Advertisement -


ಚಿರಂಜೀವಿ ವಿಪತ್ತು ಪರಿಹಾರ ವಿಮೆ ಯೋಜನೆಯಡಿ ಪ್ರತಿಯೊಬ್ಬರಿಗೂ 15 ಲಕ್ಷ ರೂ. ವಿಮೆ ನೀಡಲಾಗುವುದು, 500 ರೂ.ಯಲ್ಲಿ ಗ್ಯಾಸ್ ಸಿಲಿಂಡರ್ ವಿತರಣೆ, ರಾಜ್ಯದ ಪ್ರತಿಯೊಂದು ಮಗುವಿಗೂ ಇಂಗ್ಲಿಷ್ ಶಿಕ್ಷಣ ನೀಡಲಾಗುವುದು, ಹಳೆ ಪಿಂಚಣಿ ವ್ಯವಸ್ಥೆ ಜಾರಿ ಮಾಡುವ ಭರವಸೆ ಕಾಂಗ್ರೆಸ್ ನೀಡಿದೆ. ಈ ಗ್ಯಾರಂಟಿ ಹೊರತಾಗಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಅಧಿಕಾರಕ್ಕೆ ಬಂದರೆ ಜಾತಿ ಸಮೀಕ್ಷೆ ನಡೆಸುವುದಾಗಿ ಕಾಂಗ್ರೆಸ್ ಭರವಸೆ ನೀಡಿದೆ.



Join Whatsapp